Latestಮೈಸೂರು

ನಟ ಪುನೀತ್ ರಾಜಕುಮಾರ್ ಸ್ಮರಣೆ ಮಾಡಿ ತಲೆಮುಡಿ ಕೊಟ್ಟ ಅಭಿಮಾನಿಗಳು

ಮೈಸೂರು: ಇಂದಿಗೂ ರಾಜ್ಯದಲ್ಲಿ ತಮ್ಮ ನೆಚ್ಚಿನ ನಟನ ಪುಣ್ಯ ಸ್ಮರಣೆ ಮಾಡುತ್ತಲೇ ಇದ್ದಾರೆ. ಅದೇ ರೀತಿ ಮೈಸೂರು ಜಿಲ್ಲೆಯಲ್ಲಿ ಅಭಿಮಾನಿಯೊಬ್ಬರು ಮುಡಿ ಕೊಟ್ಟು ಅಭಿಮಾನ ಮೆರೆದಿದ್ದಾರೆ.

ನಟ ಪುನೀತ್ ರಾಜಕುಮಾರ್ ಅವರ ಅಗಲಿಕೆ ನೋವು ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ, ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಟ ಪುನೀತ್ ಅವರ ಭಾವಚಿತ್ರದ ಮುಂದೆ ಅಭಿಮಾನಿಗಳು ಬಿರಿಯಾನಿ, ಹಣ್ಣು- ಹಂಪಲು, ತಿಂಡಿ ತಿನಿಸುಗಳನ್ನಿಟ್ಟು ಪೂಜೆ ಮಾಡಿ ಮೆರವಣಿಗೆ ಮಾಡಿದರು.

ಅನಂತರ ಗ್ರಾಮದಲ್ಲಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿಗಳು ನೆಚ್ಚಿನ ನಟ ಪುನೀತ್ ರಾಜಕುಮಾರ್ ನೆನೆದು ಭಾವುಕರಾದರು.

ಪುನೀತ್ ರಾಜ​ಕುಮಾರ್ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಈ ಆದರ್ಶವನ್ನು ಪರಿಪಾಲಿಸಿರುವ ಅದೆಷ್ಟೋ ಅಭಿಮಾನಿಗಳು ತಮ್ಮ ಕಣ್ಣುಗಳ ದಾನಕ್ಕೆ ಮುಂದೆ ಬಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button