ಕಲಬುರ್ಗಿಜಿಲ್ಲಾ ಸುದ್ದಿ
ಪ್ರತಿಭಟನಾನಿರತ ಕಬ್ಬು ಬೆಳೆಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕಲಬುರ್ಗಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿ ಟನ್ ಕಬ್ಬಿಗೆ 2800 ರೂಪಾಯಿ ದರ ನಿಗದಿ ಹಾಗೂ ನವೆಂಬರ್ 15 ರ ಒಳಗೆ ಕಬ್ಬು ಬೆಳೆಗಾರರ ಹಾಗು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಗಡುವು ನೀಡಿತ್ತು. ರೈತರ ಗಡುವಿಗೆ ಡಿಸಿ ಕ್ಯಾರೆ ಅನ್ನದ ಹಿನ್ನಲೆಯಲ್ಲಿ ಇಂದು ಡಿಸಿ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಮದ್ಯ ಪ್ರವೇಶ ಮಾಡಿದ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ರೂ ಪಟ್ಟು ಬೀಡದ ರೈತರು ಪ್ರತಿಭಟನೆ ಮುಂದುವರಿಸಿದಾಗ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಡಿಸಿ ನಡೆಗೆ ಹಾಗೂ ಪೊಲೀಸರ ನಡೆಗೆ ಆಕ್ರೋಶಗೊಂಡ ರೈತರು ಡಿಸಿ ಮತ್ತು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.




