ಜಿಲ್ಲಾ ಸುದ್ದಿದಾವಣಗೆರೆ

ದಾವಣಗೆರೆ: ಮಳೆಯಿಂದ ಭಾರೀ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಡಿಸಿ ಪರಿಶೀಲನೆ

ದಾವಣಗೆರೆ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್‌. ಬೀಳಗಿ ಅವರು ಹರಿಹರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಿಡದೆ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಬೆಳೆ, ಮನೆಗಳು ಕಳೆದುಕೊಂಡ  ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ನೀಡಿ ವೀಕ್ಷಿಸಿದರು‌.

ಹರಿಹರ ತಾಲ್ಲೂಕಿನ ಹೊಳೆಸಿರಿಗೇರಿ, ಜಿಗಳಿ, ಹುಲಿಗಿನಹೊಳೆ, ಎಳೆಹೊಳೆ, ಧೂಳೆಹೊಳೆ ಇನ್ನೂ ಇತರೆ ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈತರಿಂದ ಮಾಹಿತಿ ಪಡೆದರು.

ಯಾವ ಯಾವ ಗ್ರಾಮಗಳಲ್ಲಿ ಬೆಳೆ ಹಾನಿ ಆಗಿರುವುದರ ಬಗ್ಗೆ ಕೂಡಲೇ ಸಂಬಂಧಿಸಿದ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ವರದಿಯನ್ನು ತಯಾರಿಸಿ ಕೂಡಲೇ ರೈತರಿಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ದೊರಕಿಸಿಕೊಡುವ ಕೆಲಸವನ್ನು ಮಾಡಬೇಕೆಂದು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗ್ರೇಡ್ 2 ತಹಶೀಲ್ದಾರ್ ಶಶಿಧರ್, ರಾಜಸ್ವ ನಿರೀಕ್ಷಕ ಆನಂದ್, ಉಪ ತಹಶೀಲ್ದಾರ್ ರವಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು

Spread the love

Related Articles

Leave a Reply

Your email address will not be published. Required fields are marked *

Back to top button