ಕೊಡಗಿನಲ್ಲಿ ಅಕಾಲಿಕ ಮಳೆಯಿಂದ ಸಂಭವಿಸಿದ ಹಾನಿಯ ಸಮೀಕ್ಷೆ; ಸಿಎಂ ಸೂಚನೆ

ಮಡಿಕೇರಿ : ಜಿಲ್ಲಯಲ್ಲಿ ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಕಾಫಿ, ಕೃಷಿ, ಮೂಲಸೌಲಭ್ಯ ಮತ್ತಿತರ ಹಾನಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಮುಖ್ಯಮಂತ್ರಿ ಅವರು ತಕ್ಷಣವೇ ಸಮೀಕ್ಷೆ ಮಾಡಿ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಅಕಾಲಿಕ ಮಳೆಯಿಂದ ಉಂಟಾದ ನಷ್ಟದ ಬಗ್ಗೆ ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿ ಅವರಿಂದ ಮಾತನಾಡಿದರು. ಕಾಫಿ, ಕೃಷಿ, ತೋಟಗಾರಿಕೆ ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋಟರ್ಲ್ನಲ್ಲಿ ನಮೂನೆ ಮಾಡುವಂತೆ ಸೂಚಿಸಿದರು.
ಅಕಾಲಿಕ ಮಳೆಯಿಂದ ಉಂಟಾದ ಹಾನಿ ಸಂಬಂಧ ಸಮೀಕ್ಷೆ ಮಾಡುವುದರ ಜೊತೆಗೆ, ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಹೇಳಿದರು.
ವಸತಿ ಸಚಿವರಾದ ವಿ.ಸೋಮಣ್ಣ ಅವರು ಇನ್ಫೋಸಿಸ್ ಸಂಸ್ಥೆಯಿಂದ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಲಭ್ಯ ಸಂಬಂಧ ಮಾಹಿತಿ ಪಡೆದರು.
ಕಂದಾಯ ಸಚಿವರಾದ ಆರ್.ಅಶೋಕ್ ಅವರು ಅಕಾಲಿಕ ಮಳೆಯಿಂದ ಉಂಟಾದ ಹಾನಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕಾಫಿ ಬೆಳೆ ಹಾನಿ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಮಾಡಿ ವರದಿ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ರಾಜು ಮೊಗವೀರ, ನಾನಾ ಇಲಾಖೆ ಅಧಿಕಾರಿಗಳು, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಅಧಿಕಾರಿಗಳು ಹಾಜರಿದ್ದರು.




