ಜಿಲ್ಲಾ ಸುದ್ದಿಮೈಸೂರು
ಕಾರು – ಬೈಕ್ ಮುಖಾಮುಖಿ ಡಿಕ್ಕಿ : ಸಹೋದರರಿಬ್ಬರು ಸಾವು

ಮೈಸೂರು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ನಲ್ಲಿದ್ದ ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ತಾಲೂಕಿನ ಇಲವಾಲ ಸಮೀಪದ ಹೊಸರಾಮನಹಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಹೊಸಕೋಟೆ ಗ್ರಾಮದ ವಿಶ್ವ (21) ಮತ್ತು ವಿಷ್ಣು(19) ಮೃತ ಸಹೋದರರು ಎಂದು ಗುರುತಿಸಲಾಗಿದೆ. ಹೊಸಕೋಟೆಯಿಂದ ಬೈಕ್ ಮೂಲಕ ಕೆ.ಆರ್.ನಗರಕ್ಕೆ ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಕೆರೆಗೆ ಬಿದ್ದಿದ್ದು, ಮತ್ತೊರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸದ್ಯ ಕಾವೇರಿ ಹಿನ್ನೀರಿನಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತ ದೇಹ ಶೋಧಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಭಂದ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




