ಉತ್ತರ ಕನ್ನಡಜಿಲ್ಲಾ ಸುದ್ದಿ

ಹೊನ್ನಾವರ : ಕಂಟೇನರ್ ಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ

ಕಾರವಾರ : ದಾಖಲೆ ಇಲ್ಲದೇ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೊನ್ನಾವರ ಪೊಲೀಸರು ಲಾರಿ ಸಮೇತ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಹೊನ್ನಾವರ ತಾಲೂಕಿನ ಆರೊಳ್ಳಿಯ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ 500 ಕ್ವಿಂಟಲ್ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಅನ್ನಭಾಗ್ಯ ಪಡಿತರ ಅಕ್ಕಿ ಎನ್ನುವ ಅನುಮಾನ ಹುಟ್ಟುಹಾಕಿದೆ. 500 ಕ್ವಿಂಟಲ್ ಅಕ್ಕಿ ತುಂಬಿದ 2 ಲಾರಿಯನ್ನು ತಾಲೂಕು ತಹಶೀಲ್ದಾರ ಹಾಗೂ ಆಹಾರ ನಿರೀಕ್ಷಕರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

ವಶಪಡಿಸಿಕೊಂಡ ಅಕ್ಕಿಯನ್ನು ಹೊನ್ನಾವರದ ಕರ್ಕಿಯಲ್ಲಿರುವ ದಾಸ್ತಾನು ಮಳಿಗೆಯಲ್ಲಿ ಇಡಲಾಗಿದೆ.ಹೊನ್ನಾವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಹೊನ್ನಾವರ ಸಿಪಿಐ ಶ್ರೀಧರ ಎಸ್.ಆರ್, ಪಿಎಸ್‍ಐ ಶಶಿಕುಮಾರ್, ನಿರಂಜನ್, ತಹಶೀಲ್ದಾರ್ ನಾಗರಾಜ, ಆಹಾರ ನಿರೀಕ್ಷಕ ವೆಂಕಟ್ರಮಣ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button