Latestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡ: SDM ವೈದ್ಯಕೀಯ ಕಾಲೇಜಿನ 66ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​​​​​​​​​​​​

ಧಾರವಾಡ: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಎರಡನೇ ಅಲೆಯು ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವಾಗಲೇ ಧಾರವಾಡದ ಎಸ್​​ಡಿಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೋವಿಡ್-19 ವೈರಸ್ ಸ್ಪೋಟಗೊಂಡಿದೆ. ಎಸ್ ಡಿ ಎಂ ವೈದ್ಯಕೀಯ ಕಾಲೇಜಿನ 66 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಈಗ‌ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಎಸ್ ಡಿ ಎಂ ವೈದ್ಯಕೀಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಗೆಟ್ ಟು ಗೆದರ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಇದೇ ಪಾರ್ಟಿಯಲ್ಲಿ ಭಾಗವಹಿಸಿದ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ -19 ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ಇನ್ನೂ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ವರದಿಯ ಸಂಖ್ಯೆ ಹೆಚ್ಚಾದ ಬೆನ್ನಲ್ಲೇಯಲ್ಲಿ ಈಗ ಎಸ್ ಡಿ ಎಸ್ ವೈದ್ಯಕೀಯ ಮಾಹಾವಿದ್ಯಾಲಯ ಆಡಳಿತ ಮಂಡಳಿಯು ಎಚ್ಚೆತ್ತುಕೊಂಡು, ಪಾರ್ಟಿಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿಗಳಿಗೂ ಈಗ ಕೊರೊನಾ ಟೆಸ್ಟ್ ಮಾಡಲು ಮುಂದಾಗಿದೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಡಾ.ಯಶವಂತ ಭೇಟಿ

ಧಾರವಾಡ ಸತ್ತೂರು ಬಳಿ ಎಸ್ ಡಿ ಎಂ ವೈದ್ಯಕೀಯ ಮಾಹಾವಿದ್ಯಾಲಯದಲ್ಲಿ ಕೊರೊನಾ ಸ್ಪೋಟ್ ಸುದ್ದಿ ಹೊರ ಬೀಳುತ್ತಿದಂತೆ. ಎಸ್ ಡಿ ಎಂ ಆಸ್ಪತ್ರೆಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಯಶವಂತ ಭೇಟಿ ನೀಡಿ ಪರಿಶೀಲನೆ ಕೈಗೊಂಡರು. ಈ ವೇಳೆ ಎಸ್ ಡಿ ಎಂ ವೈದ್ಯಕೀಯ ಮಾಹಾವಿದ್ಯಾಲಯದ ಪ್ರಾಚಾರ್ಯೆ ಡಾ.ರತ್ನಮಾಲಾ ದೇಸಾಯಿ ಹಾಜರಿದ್ದು, ಈಗಾಗಲೇ ವೈದ್ಯಕೀಯ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಸ್ವಾಬ್ ಟೆಸ್ಟ್ ಮಾಡಿಸಲಾಗುತ್ತಿದೆ. ಜೊತೆಗೆ ಹೆಚ್ಚಾಗಿ ಕೊರೊನಾ ಪಾಸಿಟಿವ್ ಬಂದಂತಹ ವಿದ್ಯಾರ್ಥಿಗಳ ವಸತಿ ನಿಲಯವನ್ನು ಸೀಲ್ಡ್ ಡೌನ್ ಮಾಡಲಾಗಿದೆ. 100 ಜನ ವಿದ್ಯಾರ್ಥಿಗಳನ್ನು ಈಗಾಗಲೇ ಕ್ವಾರಂಟೈನ್‌ ಮಾಡಲಾಗಿದೆ ಎಂದು ವಿವರಣೆ ನೀಡಿದರು. ‌

ಕೊರೊನಾ ಹೊರಗಡೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಾಗುಲಾಗುವುದು: ಜಿಲ್ಲಾಧಿಕಾರಿ

ಎಸ್ ಡಿ ಎಂ ಆವರಣಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರು, ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಎಸ್ ಡಿ ಎಂ ವೈದ್ಯಕೀಯ ವಿದ್ಯಾರ್ಥಿಗಳು ಗೆಟ್ ಟು ಗೆದರ್ ಪಾರ್ಟಿ ಮಾಡಿದ್ದಾರೆ. ಅಲ್ಲಿಂದ ಕೊರೊನಾ ವೈರಸ್ ಸ್ಪೋಟ್‌ಗೊಂಡಿದೆ ಎಂಬ ಮಾಹಿತಿ ಇದೆ. ಈಗಾಗಲೇ ಆಸ್ಪತ್ರೆಯಿಂದ ಪಾಸಿಟಿವ್ ವಿದ್ಯಾರ್ಥಿಗಳ ಸಂಖ್ಯೆ ಪಡೆದುಕೊಳ್ಳಲಾಗಿದ್ದು, 66 ಜನ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಈ ವೈರಸ್ ಹೊರಗಡೆಗೆ ಹರಡದಂತೆ ಕ್ರಮ ಕೈಗೊಳ್ಳಲಾಗುವುದು. ಪಾರ್ಟಿಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳನ್ನು ಟೆಸ್ಟ್‌ಗೆ ಒಳಪಡಿಸಲಾಗಿದ್ಸು, ಅವರ ವರದಿಯು ಬರಬೇಕಾಗಿದೆ. ವೈರಸ್ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಒಟ್ಟು 400 ಜನ ವಿದ್ಯಾರ್ಥಿಗಳಿದ್ದು, 300 ವಿದ್ಯಾರ್ಥಿಗಳಿಗೆ ಸ್ವಾಬ್ ಟೆಸ್ಟ್ ಮಾಡಲಾಗಿದೆ. ಜೊತೆಗೆ ಆಸ್ಪತ್ರೆಯ 3 ಸಾವಿರ ಜನರಿಗೂ ಟೆಸ್ಟ್ ಮಾಡಲು ಸೂಚಿಸಲಾಗಿದೆ. ಮತ್ತೆ ಯಾರಿಗಾದರೂ ಕೊರೊನಾ ವೈರಸ್ ಗುಣಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಕ್ಷಣವೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button