ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ನಾವು ಯಾರ‌ ಪರವೂ ಇಲ್ಲ, ವಿರುದ್ಧವೂ ಇಲ್ಲ: ಮಾಜಿ‌ ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ನಾವು ಕೇಳಿದ ಅಭ್ಯರ್ಥಿಗೆ ಪರಿಷತ್ ಟಿಕೆಟ್ ಸಿಕ್ಕಿಲ್ಲ ಎನ್ನುವುದು ಸುಳ್ಳು. ನಾವು ಯಾರ ವಿರುದ್ದವೂ ಇಲ್ಲ, ಯಾರ ಪರವೂ ಅಲ್ಲ. ಬಳ್ಳಾರಿ‌ ಜಿಲ್ಲೆಯಲ್ಲಿ ಕೆ.ಸಿ.ಕೊಂಡಯ್ಯ ಅವರಿಗೆ ಟಿಕೆಟ್ ನೀಡಿದ್ದು ಯಾವುದೇ ಬೇಸರ ಇಲ್ಲ. ಬಳ್ಳಾರಿ ಹಾಗೂ ಧಾರವಾಡದಲ್ಲಿ ನಮ್ಮ ಪಕ್ಷದ ಪರಿಷತ್ ಅಭ್ಯರ್ಥಿ ಪರ ನಾವು ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಪಡೆಯುವಲ್ಲಿ ಯಾವುದೇ ಹಿನ್ನಡೆ ಎಂಬುದು ಇರುವುದಿಲ್ಲ. ನಾವು ಹೇಳಿದವರಿಗೆ ಟಿಕೆಟ್ ಕೊಡಬೇಕು ಎಂದೆನಿಲ್ಲ. ಹೈಕಮಾಂಡ ಯಾರಿಗೆ ಟಿಕೆಟ್ ಕೊಡುತ್ತೋ ಅವರ ಪರವಾಗಿ ನಾವು ಪ್ರಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.

ಕೆ.ಸಿ.ಕೊಂಡಯ್ಯ ಅವರಿಗೆ ಟಿಕೆಟ್ ನೀಡಿದಕ್ಕೆ ನಮಗೆ ಸಂತೋಷವಿದೆ, ಯಾವುದೇ ಬೇಸರವಿಲ್ಲ. ಬಳ್ಳಾರಿ ಹಾಗೂ ವಿಜಯನಗರದಲ್ಲಿ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಜೊತೆಗೆ ಧಾರವಾಡ ವಿಧಾನ ಪರಿಷತ್ ಮತಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಎಲ್ಲಿ ಸೂಚಿಸಿದರು ಕೂಡ, ಅಲ್ಲಿಗೆ ಹೋಗಿ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button