ಮೆಟ್ರೋ
66 ಕನ್ನಡ ಪುಸ್ತಕಗಳ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ೬೬ ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೬೬ ಕನ್ನಡ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ನಾಡಿನ ಹೆಸರಾಂತ ಸಾಹಿತಿಗಳ ಪುಸ್ತಕಗಳನ್ನು ಸಿಎಂ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಾಹಿತಿ ಕಮಲಾ ಹಂಪನಾ, ಹಿರಿಯ ಕವಿಗಳಾದ ಎಚ್ ಎಸ್ ವೆಂಕಟೇಶಮೂರ್ತಿ, ದೊಡ್ಡರಂಗೇಗೌಡ, ಸಪ್ನ ಬುಕ್ ಹೌಸ್ ಮುಖಸ್ಥ ನಿತಿನ್ ಷಾ, ಪತ್ರಕರ್ತ ರವಿ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



