Breaking NewsLatest
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ ರಾಜ್ಯ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ತಿಂಗಳ 27 ರಂದು ಮತದಾನ ನಡೆಯಲಿದೆ.ಈ ಕುರಿತು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ.
ಅವಧಿ ಮುಗಿದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳ 1,185 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ.
ಮುಂದಿನ ತಿಂಗಳ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದ್ದು, ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ
