Latestಮೈಸೂರುರಾಜಕೀಯ

ಜೆಡಿಎಸ್ ನಿಂದ ಸಚಿವ ಎಸ್ ​​ಟಿ ಸೋಮಶೇಖರ್ ವಿರುದ್ದ ಜಿಲ್ಲಾಧಿಕಾರಿಗೆ ದೂರು

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್ ಕಾನೂನು ಘಟಕದಿಂದ ಮೈಸೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಅವರಿಗೆ ದೂರು ನೀಡಿದೆ.

ಮೈಸೂರು- ಚಾಮರಾಜನಗರದ ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟದಲ್ಲಿ ನಂಬರ್ ಒನ್ ಎಂದು ಅಭ್ಯರ್ಥಿ ಸಿ.ಎನ್.ಮಂಜೇಗೌಡ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜೆಡಿಎಸ್ ಮುಖಂಡರು ದೂರು ನೀಡಿದ್ದಾರೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ರವಿಚಂದ್ರೇಗೌಡ, ಎಸ್.ಟಿ.ಸೋಮಶೇಖರ್ ನಮ್ಮ ಅಭ್ಯರ್ಥಿ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಇವರ ಆರೋಪಗಳು ಚುನಾವಣಾ ನೀತಿ ಸಮಿತಿಯ ಸ್ಪಷ್ಟ ಉಲ್ಲಂಘನೆ ಎಂದು ದೂರಿದರು.

ಸಚಿವರ ವಿರುದ್ಧ ಎಫ್​​ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button