ಉತ್ತರ ಕನ್ನಡಜಿಲ್ಲಾ ಸುದ್ದಿ

ಕಾರವಾರ : ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ

ಕಾರವಾರ : ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ಬೈತಖೋಲ್ ವಾಣಿಜ್ಯ ಬಂದರಿನಿಂದ ಬಿಲ್ಟ್ ವೃತ್ತದವರೆಗೆ ಹಾಗೂ ರೈಲ್ವೆ ನಿಲ್ದಾಣಕ್ಕೆ ಸಾಗುವ ಹಬ್ಬುವಾಡದಿಂದ ಶಿರವಾಡದ ವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ವಾಣಿಜ್ಯ ಬಂದರು ಎದುರಿನ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಕೆಲ ತಿಂಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಮತ್ತು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ರಸ್ತೆ ದುರಸ್ತಿಗಾಗಿ ಹಿಂದೆ ಮನವಿ ನೀಡಿದ್ರೂ ಕೂಡ ಯಾರೂ ಕೂಡ ಗಮನಹರಿಸಿಲ್ಲ. ಹೀಗಾಗಿ ಇಂದು ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button