Latestಜಿಲ್ಲಾ ಸುದ್ದಿಮೈಸೂರು
ಆದಿವಾದಿ ಮೇಲೆ ಗುಂಡು ಹಾರಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಸೂರು: ಆದಿವಾಸಿ ವ್ಯಕ್ತಿ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟು ಜೇನು ಕುರುಬರ ಹಾಡಿ ಸಮೀಪ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೊಲೆಯತ್ನ ಆರೋಪದ ಮೇಲೆ ದೂರು ನೀಡಲಾಗಿದೆ.
ಆದಿವಾಸಿ ಬಸವ ಎಂಬುವರು ಗುಂಡೇಟಿನಿಂದ ಗಾಯಗೊಂಡಿದ್ದು, ಆದಿವಾಸಿ ಬಸವ ಜಮೀನಿನಲ್ಲಿ ಜೋಳ ಕಟಾವು ಮಾಡಿ, ಪಕ್ಕದ ಜಮೀನಿಗೆ ಬಹಿರ್ದೆಸೆಗೆ ಹೋಗಿದ್ದಾಗ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.
ಅರಣ್ಯ ಇಲಾಖೆ ವಾಚ್ ಮನ್ ಸುಬ್ರಮಣಿ ಸೇರಿ ಮೂವರು ತನ್ನ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾರೆಂದು ಗಾಯಾಳು ಪತ್ನಿ ದೂರು ನೀಡಿದ್ದಾರೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಭಂದ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



