Breaking NewsLatest
ಕರ್ನಾಟಕದ ಮೂಲಕ ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಸೋಂಕು ದೃಢ

ನವದೆಹಲಿ: ಕೊರೊನಾ ಹೊಸತಳಿ ಒಮಿಕ್ರಾನ್ ಸೋಂಕು ಇದೀಗ ಭಾರತಕ್ಕೂ ಪ್ರವೇಶಿಸಿದೆ. ಮೊದಲ 2 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿ ಆತಂಕ ಮೂಡಿಸಿದೆ.
ಒಮಿಕ್ರಾನ್ ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲೇ ಕರ್ನಾಟಕಕ್ಕೆ ಒಮಿಕ್ರಾನ್ ಮೊದಲ ಎಂಟ್ರಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ ಬಂದ 66 ವರ್ಷದ ವೃದ್ಧ. 46 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ.
ಸದ್ಯ ಸಂಪರ್ಕಿತರ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
