ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಕ್ರಿಶ್ಚಿಯನ್ ಮುಖಂಡರಿಂದ ಮೌನ ಪ್ರತಿಭಟನೆ

ಧಾರವಾಡ : ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ, ಧಾರವಾಡ ಕ್ರಿಶ್ಚಿಯನ್ ಸಮುದಾಯದ ಪ್ರಮುಖರು ಮೌನ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧಾರವಾಡದ ಹಾಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ, ಮೌನ ಪ್ರತಿಭಟನೆ ಮಾಡಿದ ಕ್ರಿಶ್ಚಿಯನ್ ಮುಖಂಡರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ಮಾಡುವ ಮೂಲಕ‌ ತಮ್ಮ ಆಕ್ರೋಶ ಹೊರ ಹಾಕಿದರು. ಇದೇ ಮತಾಂತರ ನಿಷೇಧ ಕಾಯ್ದೆ ತರುವ ಸರ್ಕಾರಗಳ ನಡೆಯನ್ನು ಖಂಡಿಸಿದರು. ‌

ಇತ್ತೀಚೆಗೆ ಕ್ರಿಶ್ಚಿಯನ್ ಸಮುದಾಯದ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲ್ಲೇ ಬರುತ್ತಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಇದನ್ನು ತಡೆಯುವಲ್ಲಿ ವಿಫಲಾಗುತ್ತಿವೆ. ಕ್ರಿಶ್ಚಿಯನ್ ಸಮುದಾಯದವರ ಮೇಲೆ ಸುಖಾಸುಮ್ಮನೆ ಮತಾಂತರ ಮಾಡುತ್ತಿದ್ದಾರೆ ಎಂದು ಹಲ್ಲೆಗಳು ನಡೆಯುತ್ತಿವೆ ಇದನ್ನು ಆದಷ್ಟು ಬೇಗ ಸರ್ಕಾರಗಳು ತಡೆಯಬೇಕು. ನಿಜವಾಗಿಯೂ ಮತಾಂತರ ಪ್ರಕ್ರಿಯೆಯಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಮ್ಮದು ಯಾವುದೇ ತಕರಾರು ಇಲ್ಲ. ಆದರೆ ಪ್ರಾರ್ಥನ ವೇಳೆಯಲ್ಲಿ ಹಲವರು ನುಗ್ಗಿ ತೊಂದರೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯ ಮಾಡಿದರು.

ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತಾಂತರ ನಿಷೇಧ ಕಾಯ್ದೆಯಿಂದ ಹಿಂದೆ ಸರಿಯಬೇಕು ಇದಕ್ಕೆ ನಮ್ಮ ತೀವ್ರವಾದ ವಿರೋಧವಿದೆ. ಹಾಗಾಗಿ ಈ ನಿರ್ಧಾರದಿಂದ ಸರ್ಕಾರಗಳು ಹಿಂದೆ ಸರಿಯಬೇಕು ಎಂದು ಅಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button