Latestಮೆಟ್ರೋ

ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ನಗರದ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬುಧವಾರ(ಡಿಸೆಂಬರ್​ 8 ರಂದು)ತಮಿಳುನಾಡಿನ ಕುನೂರ್ ನ ಸಮೀಪ ಸಂಭವಿಸಿದ ಹೆಲಿಕಾಪ್ಟರ್ ಪತನ ಘಟನೆಯಲ್ಲಿ ಬದುಕುಳಿದು, ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.

ಸಚಿವ ಆರಗ ಜ್ಞಾನೇಂದ್ರ ಅವರು ವರುಣ್ ಸಿಂಗ್ ಅವರ ತಂದೆ ಹಾಗೂ ತಾಯಿಯವರನ್ನು ಭೇಟಿ ಮಾಡಿದರು.

ವರುಣ್ ಸಿಂಗ್ ಅವರು ಶೀಘ್ರ ಗುಣಮುಖ ವಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ ಸಚಿವರು, ಕರ್ನಾಟಕ ಸರಕಾರವು, ಹೆಚ್ಚಿನ ಚಿಕಿತ್ಸೆಯೂ ಸೇರಿದಂತೆ ಎಲ್ಲ ರೀತಿಯ ಸಹಾಯ ಹಾಗೂ ನೆರವು, ನೀಡಲು ಬದ್ದವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶ ಪ್ರವೀಣ್ ಸೂದ್ ಅವರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button