
ಬೆಳಗಾವಿ: ಇಡಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಮುಂದೆಯೂ ಚುನಾವಣೆ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷವೇ ನಂಬರ್ ವನ್. ಬೆಳಗಾವಿಯಲ್ಲಿ ಬಿಜೆಪಿಯನ್ನು ಸೋಲಿಸಿದ್ದು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ. ಬಿಜೆಪಿ ಸೊಲಿಸಲೇಂದೇ ಅವರು ಪಕ್ಷೇತರ ಅಭ್ಯರ್ಥಿ ಹಾಕಿದರು ಎಂದರು.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 12 ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಇತ್ತು.11 ಮಂದಿ ಗೆದ್ದಿದ್ದಾರೆ. ಇದು ಚುನಾಯಿತ ಪ್ರತಿನಿಧಿಗಳ ತೀರ್ಪು ಫಲಿತಾಂಶ ತೃಪ್ತಿ ತಂದಿದೆ ಎಂದರು. ಒಬ್ಬ ಪಕ್ಷೇತರ ಅಭ್ಯರ್ಥಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದರೆ ಆಡಳಿತರೂಢ ಬಿಜೆಪಿಗೆ ಧಮ್ ಇಲ್ಲ ಎಂದಾಯಿತು ಎಂದು ಟಾಂಗ್ ನೀಡಿದರು.
ಇದೇ ವೇಳೆ ಪಕ್ಷದಿಂದ ಗೆದ್ದ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.



