Latestಜಿಲ್ಲಾ ಸುದ್ದಿಬೆಳಗಾವಿರಾಜಕೀಯರಾಜ್ಯಸುದ್ದಿ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆ ನಂತರ ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು ಎಂದರು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button