Breaking NewsLatestರಾಜಕೀಯರಾಜ್ಯಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ಬೀದಿಗೆ ಇಳಿದ ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು; ಎಂಇಎಸ್, ಶಿವಸೇನೆ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ: ಮಹಾರಾಷ್ಟ್ರದಲ್ಲಿ ರಾಜ್ಯದ ಧ್ವಜ ಸುಟ್ಟಿರುವುದು ಹಾಗೂ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಮಾಡಿರುವುದನ್ನು ಖಂಡಿಸಿ ಹಾಗೂ ಈ ಕೃತ್ಯ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಅಗ್ರಹಿಸಿ, ಧಾರವಾಡದಲ್ಲಿ ಜಯ ಕರ್ನಾಟಕ ಜನೊರ ವೇದಿಕೆಯ ಕಾರ್ಯಕರ್ತರು ಒ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಹಾಗೂ ಮುಖಂಡರು, ರಾಜ್ಯದ ಧ್ವಜ ಸುಟ್ಟ ದುಷ್ಕರ್ಮಿಗಳ ವಿರುದ್ಧ ಹಾಗೂ ಬೆಳಗಾವಿ ಅನಿಗೋಳ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ‌ಮಾಡಿದ ದುಷ್ಕರ್ಮಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಇತ್ತೀಚಿಗೆ ಬೆಳಗಾವಿ ಗಡಿ ಜಿಲ್ಲೆಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಕಾರ್ಯಕರ್ತರ ಉಪಟಳ ಹೆಚ್ಚಾಗಿದೆ. ಒಂದು ರಾಜ್ಯದ ಧ್ವಜದ ಮಹತ್ವ ಗೊತ್ತಿಲ್ಲ ಹೇಡಿಗಳು ಅವರಾಗಿದ್ದಾರೆ. ಬೆಳಗಾವಿ ಅನಿಗೋಳದಲ್ಲಿ ಈ ಎರಡು ಸಂಘಟನೆಯ ಪುಂಡರು ಕ್ರಾಂತಿ ವೀರ ಸಂಗೊಳ್ಳಿಬರಾತಣ್ಣ ಭಗ್ನ ಮಾಡಿದ್ದರೆ. ಇದರಿಂದ ಅವರ ಮನಸ್ಥಿತಿ ದೇಶದ ಮುಂದಾದೆ ಅನಾವರಣವಾಗಿದೆ. ಹಾಗಾಗಿ ಈ ಎರಡು ಸಂಘಟನೆಯ ವಿರುದ್ಧ ಜೊತೆಗೆ ರಾಜ್ಯದ ಧ್ವಜ ಸುಟ್ಟ ದುಷ್ಕರ್ಮಿಗಳು ಹಾಗೂ ದೇಶ ಭಕ್ತ ರಾತಣ್ಣ ಮೂರ್ತಿ ಭಗ್ನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.

ಒಂದುವೇಳೆ ನಿರ್ಲಕ್ಷ್ಯ ತೋರಿದಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ. ಈ ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯ ಮಾಡಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ‌

Spread the love

Related Articles

Leave a Reply

Your email address will not be published. Required fields are marked *

Back to top button