ಮೈಸೂರು
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಪ್ರತಿಭಟನೆ

ಮೈಸೂರು ; ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಕಲಾಮಂದಿರದ ಮುಖ್ಯ ದ್ವಾರದಲ್ಲಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಧರಣಿ ನಡೆಸಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಆಗ್ರಹಿಸಿದರು. ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರು ಬಲಪಂಥೀಯ ಚಿಂತನೆಗಳನ್ನು ಬಲವಂತವಾಗಿ ಹೇರುತ್ತಿದ್ದಾರೆ. ರಾಜಕೀಯ ಪಕ್ಷದ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಮನುವಾದಿ ಮನಸ್ಥಿತಿಯ ಅಡ್ಡಂಡ ಕಾರ್ಯಪ್ಪ ಅವರನ್ನುಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.




