ಸಿಎಂ ಸ್ಥಾನದಿಂದ ಬೊಮ್ಮಾಯಿರನ್ನು ಬದಲಾಯಿಸುವುದಿಲ್ಲ: ಪ್ರಹ್ಲಾದ್ ಜೋಷಿ ಪುನರುಚ್ಚಾರ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮೆರಿಕಾ ಪ್ರವಾಸಕ್ಕೆ ಹೋಗುತ್ತಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಲಾಗುತ್ತದೆ ಎಂಬುದು ಸುಳ್ಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಮುಖ್ಯಮಂತ್ರಿ ಯಾವುದೇ ಕಾರಣಕ್ಕೂ ಬದಲಾವಣೆಯಾಗುವುದಿಲ್ಲ ಎಂದರು. ಊಹಾಪೋಹಗಳಿಗೆ ಯಾರು ಕಿವಿಗೊಡಬಾರದು. ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಹರಡುವುದು ತಪ್ಪು ಎಂದರು.
ಸಿಎಂ ಬದಲಾವಣೆ ಬಗ್ಗೆ ಪಕ್ಷ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಆ ರೀತಿಯ ಬೆಳವಣಿಗೆ ಇದ್ರಿದ್ದೆ ನನಗೆ ಗೊತ್ತಾಗ್ತಾ ಇತ್ತು. ಸುಮ್ಮನೆ ಊಹಾಪೋಹಗಳನ್ನ ಹರಡಬಾರದು ಎಂದು ಮನವಿ ಮಾಡಿದರು. 2023ರ ವಿಧಾನ ಸಭಾ ಚುನಾವಣೆವರೆಗೂ ಬೊಮ್ಮಾಯಿ ಸಿಎಂ ಆಗಿರುತ್ತಾರೆ ಸ್ಪಷ್ಟಪಡಿಸಿದರು.
ಸಂಸತ್ ಸದನದಲ್ಲಿ ಪ್ರತಿಪಕ್ಷಗಳ ವರ್ತನೆಗೆ ವಿಷಾದ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಷಿ ಪ್ರಧಾನಿ ನರೇಂದ್ರ ಮೋದಿ ಎನು ಮಾಡಿದ್ರು ಕಾಂಗ್ರೆಸ್ ನವರು ವಿರೋಧ ಮಾಡುತ್ತಿದ್ದಾರೆ ಎಂದು ದೂರಿದರು.
ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ಸೇವೆಯಲ್ಲಿ ತೊಡಗಿಸುಕೊಳ್ಳಬೇಕು ಎಂಬ ಪ್ರಧಾನಿ ಆಶಯದಂತೆ ಹುಬ್ಭಳಿಯಲ್ಲಿ ರುದ್ರಭೂಮಿ ಸ್ವಚ್ಚತಾ ಕಾರ್ಯಕ್ರಮ ಹಮಿಕೊಳ್ಳಲಾಗಿದೆ ಎಂದು ತಿಳಿಸಿದರು.
