ಕೋಲಾರಜಿಲ್ಲಾ ಸುದ್ದಿ
ದೇವರಾಜ ಅರಸು ವೈದ್ಯಕೀಯ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆದಿದ್ದು ಇಲ್ಲಿನ ದೇವರಾಜ ಅರಸು ವೈದ್ಯ ಕಾಲೇಜಿನ 33 ವಿದ್ಯಾರ್ಥಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಕೊರೋನಾ ಸೋಂಕು ದೃಢಪಟ್ಟಿದ್ದು ಅವರನ್ನು ಕಾಲೇಜಿನ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.
ಸುದ್ದಿಗಾರರಿಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜಗದೀಶ್ ಈ ವಿಷಯ ತಿಳಿಸಿದ್ದು, ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಸೋಂಕು ಪತ್ತೆಯಾಗಿದ್ದು ಅವರನ್ನು ಐಸೋಲೇಷನ್‌ನಲ್ಲಿ ಇಡಲಾಗಿದೆ. ಉಳಿದವರನ್ನು ಆಸ್ಪತ್ರೆಯ ವಿದ್ಯಾರ್ಥಿನಿಲಯದಲ್ಲಿ ಕ್ವಾರಂಟೇನ್ ಮಾಡಲಾಗಿದೆ ಎಂದರು.
ಕಳೆದ ಎರಡು ದಿನಗಳಲ್ಲಿ 1130 ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.ಈವರೆಗೆ ಜಿಲ್ಲೆಯಲ್ಲಿ ಒಂದೆರಡು ಕೊರೋನ ಕೇಸ್‌ಗಳು ಕಾಣಿಸಿಕೊಳ್ಳುತ್ತಿದ್ದು ಎರಡು ದಿನಗಳಲ್ಲಿ ಕಾಲೇಜೊಂದರಲ್ಲಿಯೇ 33 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ ಬಂದಿರುವುದು ಜನರ ಆತಂಕಕ್ಕೆಡೆ ಮಾಡಿಕೊಟ್ಟಿದೆ.




