ಜಿಲ್ಲಾ ಸುದ್ದಿಮೈಸೂರು
ಮೈಸೂರು ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು

ಮೈಸೂರು: ಮೈಸೂರಿನಲ್ಲಿ ಶನಿವಾರ 13 ಕೊರೋನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,80,218 ಕ್ಕೇರಿಕೆಯಾಗಿವೆ.ಶನಿವಾರ 11 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮೈಸೂರಿನಲ್ಲಿ ಇದುವರೆಗೂ 1,77,660 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ 122 ಸಕ್ರಿಯ ಪ್ರಕರಣಗಳಿವೆ. ಶನಿವಾರ ಕೊರೋನಾ ಸೋಂಕಿತರು ಸಾವನ್ನಪ್ಪಿದ ಪ್ರಕರಣ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ 2,436 ಮಂದಿ ಕೊರೊನಾ ಸೋಂಕಿತರು ಸಾವನಪ್ಪಿದ್ದಾರೆ.




