Latestಜಿಲ್ಲಾ ಸುದ್ದಿದಾವಣಗೆರೆ

ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯೂಟ್: ತಪ್ಪಿದ ಅನಾಹುತ

ದಾವಣಗೆರೆ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಟ್ರಾನ್ಸ್ ಫಾರ್ಮರ್ ಹೊತ್ತಿ ಉರಿದಿದ ಘಟನೆ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಚ್ ಕೆ ಆರ್ ಸರ್ಕಲ್ ಹತ್ತಿರ ಮೆಡ್ ಪ್ಲಸ್ ಶಾಪ್ ಬಳಿ ನಡೆದಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು. ಟ್ರಾನ್ಸ್ ಫಾರ್ಮರ್ ಗೆ ಹಾಕಿ ಕೇಬಲ್ ಗಳಿಗೂ ಬೆಂಕಿಯ ಕೆನ್ನಾಲಿಗೆ ಹರಡಿತು. ಪಕ್ಕದ ಕಟ್ಟಡಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಕೂದಲೆಳೆಯಲ್ಲಿ ತಪ್ಪಿದೆ. ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿಬಂದ ಬೆಸ್ಕಾಂ ಸಿಬ್ಬಂದಿ  ಸ್ಥಳಕ್ಕೆ ಬಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸಂಭವನೀಯ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

ಬೆಂಕಿಯಿಂದಾಗಿ ಪ್ರದೇಶದಲ್ಲಿ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಬೆಂಕಿ ಹೊತ್ತಿಕೊಂಡ ಪರಿಣಾಮ ಟ್ರಾನ್ಸ್ ಫಾರ್ಮರ್ ಸುಟ್ಟು ಹೋಗಿದ್ದು, ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿತ್ತು. .

Spread the love

Related Articles

Leave a Reply

Your email address will not be published. Required fields are marked *

Back to top button