Breaking NewsLatestಜಿಲ್ಲಾ ಸುದ್ದಿರಾಜಕೀಯರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಲ್ಲಿ ಇಂದು, ನಾಳೆ ಬಿಜೆಪಿ ಕಾರ್ಯಕಾರಿಣಿ:ಮಹತ್ವದ ವಿಚಾರ ಚರ್ಚೆ ಬಗ್ಗೆ ಸಸ್ಪೆನ್ಸ್ ಕಾಯ್ದಿಟ್ಟ ಕಟೀಲ್

ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸೋಮವಾರ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯ ಹಿನ್ನೆಲೆ ‌ನಗರಕ್ಕೆ ಆಗಮಿಸಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಲಿರುವ ಎರಡು ಮಹತ್ವದ ವಿಚಾರಗಳು ಯಾವುದು ಎಂಬುದರ ಬಗ್ಗೆ ಸಸ್ಪೆನ್ಸ್ ಕಾಯ್ದಿಟ್ಟರು. ಅದನ್ನು ಮಂಗಳವಾರ ಬಹಿರಂಗ ಪಡಿಸಲಾಗುವುದು ಎಂದರು.

ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ಮಾಡುವ ವಿಚಾರಗಳ ಬಗ್ಗೆ ಮಂಗಳವಾರ ಮಾಹಿತಿ ಕೊಡುತ್ತೇವೆ. ಎಲ್ಲ‌ ರೀತಿಯಲ್ಲಿ ತಯಾರಿ ಮಾಡಿದ್ದೇವೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹಾಗೂ ಜೋಶಿ‌, ಶೆಟ್ಟರ್ ನೇತೃತ್ವದಲ್ಲಿ ಸಿದ್ಧತೆಗಳು ಅಚ್ಚುಕಟ್ಟಾಗಿ ನಡೆದಿವೆ ಎಂದರು.

ಕಾರ್ಯಕಾರಿಣಿ ಸಭೆಗೆ ಎಲ್ಲ‌ ರೀತಿಯಲ್ಲಿ ತಯಾರಿ ಮಾಡಿದ್ದೇವೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹಾಗೂ ಜೋಶಿ‌, ಶೆಟ್ಟರ್ ನೇತೃತ್ವದಲ್ಲಿ ಸಿದ್ಧತೆಗಳು ಅಚ್ಚುಕಟ್ಟಾಗಿ ನಡೆದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಕಾರ್ಯಕಾರಿಣಿ ಸಬೆ ಮೂರು ರೀತಿಯಲ್ಲಿ ನಡೆಯುತ್ತದೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಸಲಾಗಿದೆ. ಈ ಬಾರಿ ಹುಬ್ಬಳ್ಳಿಯಲ್ಲಿ‌ ಸಭೆ ಹಮ್ಮಿಕೊಳ್ಳಾಗಿದೆ ಎಂದು ತಿಳಿಸಿದರು.

ಸಿಎಂ ಬದಲಾಗುತ್ತಾರೆ ಎಂಬುದು ಕೇವಲ ಉಹಾಪೋಹ. ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿಯವರೇ ಸಿಎಂ. ಯಡಿಯೂರಪ್ಪ ರಾಜೀನಾಮೆ ಕೊಟ್ಟು, ಬಸವರಾಜ ಬೊಮ್ಮಾಯಿ‌ ಸಿಎಂ ಆದ ನಂತರದ ದಿನದಿಂದಲೂ ಸಿಎಂ ಬದಲಾಗುತ್ತಾರೆ ಎಂಬ ಮಾತು ಇತ್ತು. ಆದರೆ‌ ಈಗಲೂ ಅವರೇ ಇದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button