Latestಜಿಲ್ಲಾ ಸುದ್ದಿಮೈಸೂರು
ಕರ್ನಾಟಕ-ಕೇರಳ ಗಡಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆ

ಮೈಸೂರು: ಕೇರಳದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ, ಕರ್ನಾಟಕ ಕೇರಳ ಗಡಿ ಮೈಸೂರು ಜಿಲ್ಲೆ ಹೆಚ್,ಡಿ,ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾರೆ.ಬಾವಲಿ ಚೆಕ್ ಪೋಸ್ಟ್ ಗೆ ತಾಲ್ಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಕೇರಳದಿಂದ ಜನರು ಆಗಮಿಸುತ್ತಿದ್ದಾರೆ. ಹೀಗಾಗಿ ಸದ್ಯ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಯಾಣಿಕರನ್ನು ತೀವ್ರ ತಪಾಸಣೆ ಮಾಡುತ್ತಿದ್ದಾರೆ.
ಕೋವಿಡ್ ವರದಿಯನ್ನ ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆರೋಗ್ಯಧಿಕಾರಿ ರವಿಕುಮಾರ್ ಸೂಚನೆ ನೀಡಿದ



