ಕಲಬುರ್ಗಿಜಿಲ್ಲಾ ಸುದ್ದಿ
ಕಲಬುರ್ಗಿ: ತೆಲೆ ಮೇಲೆ ಕಲ್ಲುಹಾಕಿ ವ್ಯಕ್ತಿಯ ಬರ್ಬರ ಕೊಲೆ

ಕಲಬುರಗಿ: ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ಇಲ್ಲಿನ ತಾಜ್ ನಗರದಲ್ಲಿ ನಡೆದಿದೆ. ಮೆಹಬೂಬ್ ನಗರದ ನಿವಾಸಿ ಸೈಯದ್ ಗೌಸ್ (42) ಕೊಲೆಯಾದ ವ್ಯಕ್ತಿ. ನಿನ್ನೆ ತಡರಾತ್ರಿ ನಡೆದ ಹೊಸ ವರ್ಷದ ಪಾರ್ಟಿ ಮುಗಿದ ಬಳಿಕ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ಪರೀಶಿಲನೆ ಮಾಡಿದ್ದಾರೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.




