ಉತ್ತರ ಕನ್ನಡಜಿಲ್ಲಾ ಸುದ್ದಿ
Illegal Liquor: ಕಾರವಾರದಲ್ಲಿ ಅಕ್ರಮ ಗೋವಾ ಮದ್ಯ ವಶ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹೋಟೆಗಾಳಿ ಗ್ರಾಮದ ಭೀಮಕೋಲ್ ವ್ಯಾಪ್ತಿಯ ಅರಣ್ಯದಲ್ಲಿ ಅಕ್ರಮವಾಗಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ಚಿತ್ತಾಕುಲ ಠಾಣಾ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಕಿರಣ್ ಪಡುವಳಕರ್ ಎನ್ನುವವರು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಭೀಮಕೋಲ್ ಅರಣ್ಯ ಪ್ರದೇಶದಲ್ಲಿ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದಾಗಿ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕದ್ರಾ ಸಿಪಿಐ ಗೋವಿಂದರಾಜ ಟಿ.ದಾಸರಿ ನೇತೃತ್ವದಲ್ಲಿ ದಾಳಿ ನಡೆಸಿದ್ದರು.
ಈ ವೇಳೆ ಅರಣ್ಯದಲ್ಲಿ ಅಕ್ರಮವಾಗಿ ಹುದುಗಿಸಿಡಲಾಗಿದ್ದ ಸುಮಾರು 21.400 ರೂ.ಮೌಲ್ಯದ ಗೋವಾ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯಿದೆಯಂತೆ ಕಲಂ 32,34 ರಂತೆ ಪ್ರಕರಣ ದಾಖಲಿಸಿ ಆರೋಪಿ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ




