Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯರಾಮನಗರಸುದ್ದಿ

ಸಚಿವ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಯತ್ನ ಪ್ರಕರಣ, ಪೊಲೀಸರಿಂದ ವರದಿ ಕೇಳಲಾಗಿದೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಮನಗರದ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ಸಚಿವ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಯತ್ನ ಘಟನೆ ಕುರಿತು ಜಿಲ್ಲಾ ಪೊಲೀಸರಿಂದ ವರದಿ ಕೇಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಚಿವ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಸಿಎಂ ಸಮ್ಮುಖದಲ್ಲೇ ಹಲ್ಲೆಗೆ ಪ್ರಯತ್ನಿಸುವ ಮೂಲಕ ಕಾಂಗ್ರೆಸ್ ತನ್ನ ನಿಜ ಸ್ವರೂಪವಾದ  ಗೂಂಡಾ ಸಂಸ್ಕೃತಿಯನ್ನು ಮತ್ತೊಮ್ಮೆ ರಾಜ್ಯದಲ್ಲಿ ಅನಾವರಣಗೊಳಿಸಿದೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಅನಾಗರಿಕ ವರ್ತನೆಯನ್ನು ಖಂಡಿಸುತ್ತೇನೆ. ಅವರ ದುಂಡಾವರ್ತನೆಯನ್ನು ಜನರು ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button