Breaking NewsLatestಮೆಟ್ರೋರಾಜ್ಯಸುದ್ದಿ

ರಾಜ್ಯದಲ್ಲಿ ಬಿಗಿ ಕ್ರಮಗಳ ಬಗ್ಗೆ ಸಿಎಂ ಸಭೆಯಲ್ಲಿ ನಿರ್ಧಾರ: ಸಚಿವ ಕೆ ಸುಧಾಕರ್​

ಬೆಂಗಳೂರು : ರಾಜ್ಯದಲ್ಲಿ 3ನೇ ಅಲೆ ಶುರುವಾಗಿದೆ ಒಮಿಕ್ರಾನ್ ವೇಗವಾಗಿ ಹರುಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಜನರ ಮೇಲೆ ಒತ್ತಡ ಬೀಳದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಸಭೆ ಕರೆದಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಗಳ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ. ಜನರ ಮೇಲೆ ಒತ್ತಡ ಹಾಕದಂತೆ ಸೋಂಕು ನಿಯಂತ್ರಣ ಮಾಡಲಾಗುತ್ತದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದರು.

ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಮಾಡಲಾಗುತ್ತದೆ. ಲಾಕ್ ಡೌನ್ ಬದಲು ಟಫ್ ರೂಲ್ಸ್ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಮಕ್ಕಳಿಗೆ ಕೋವಿಡ್ ಲಸಿಕೆ ಸಂಬಂಧ ಮೊದಲ ಡೋಸ್ ಕೊಡಲು ಕೇಂದ್ರ ಹೇಳಿದೆ. 2ನೇ ಡೋಸ್ ಗೆ ಕೇಂದ್ರದಿಂದ ನಿರ್ದೇಶನ ಬಂದಿಲ್ಲ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button