ಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ
ಸಂಸದ ಡಿ.ಕೆ.ಸುರೇಶ್ ವಿರುದ್ಧ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ : ರಾಮನಗರದಲ್ಲಿ ಸೋಮವಾರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ ಹಾಗೂ ಮೇಲ್ಮನೆ ಸದಸ್ಯ ರವಿ ಸಿಎಂ ಗೂಂಡಾ ವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಿ ಹಾಗೂ ಕೂಡಲೇ ಕ್ಷಮೆ ಕೇಳುವಂತೆ ಅಗ್ರಹಿಸಿ, ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಸಂಸದ ಡಿ.ಕೆ ಸುರೇಶ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ, ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಸಂಸದ ಡಿ ಕೆ ಸುರೇಶರವರ ಭಾವಚಿತ್ರ ಹಿಡಿದು ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು, ಡಿ ಕೆ ಸುರೇಶ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರಿಗೆ ಡಿ.ಕೆ.ಸುರೇಶ್ ದಮ್ಕಿ ಹಾಕಿ ತಮ್ಮ ಅಸಲಿ ಮುಖವನ್ನು ಜಗತ್ತಿಗೆ ತೋರಿಸಿದ್ದಾರೆ. ತಕ್ಷಣ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಅಗ್ರಹಿಸಿದರು.




