Breaking NewsLatestಆರೋಗ್ಯರಾಷ್ಟ್ರೀಯಸುದ್ದಿ
ಕೋವಿಡ್ ಪರೀಕ್ಷೆ ಹೆಚ್ಚಿಸಲು 9 ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ದೇಶಾದ್ಯಂತ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ 9 ರಾಜ್ಯಗಳಿಗೆ ಪತ್ರ ಬರೆದಿದೆ.
ಆರೋಗ್ಯ ಸಚಿವಾಯಲದ ಹೆಚ್ಚವರಿ ಕಾರ್ಯದರ್ಶಿ ಆರತಿ ಅಹುಜಾ ತಮಿಳುನಾಡು, ಒಡಿಸ್ಸಾ, ಪಂಜಾಬ್, ಉತ್ತರ ಪ್ರದೇಶ, ಉತ್ತರಕಾಂಡ ಮಿಜೋರಾಂ, ಮೇಘಾಲಯ , ಜಮ್ಮು ಮತ್ತು ಕಾಶ್ಮೀರ ಹಾಗೂ ಬಿಹಾರ ರಾಜ್ಯಗಳಿಗೆ ಪತ್ರ ಬರೆದು ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಪರೀಕ್ಷೆ ನಡೆಸಿ ಸೋಂಕು ಬೇರೆಯವರಿಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆಯೂ ಕೇಂದ್ರ ಕಿವಿಮಾತು ಹೇಳಿದೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ರಾಜ್ಯಗಳಿಗೆ ಪತ್ರ ರವಾನಿಸಿದೆ,
