ದೇಶದಲ್ಲಿ ಒಂದೇ ದಿನದಲ್ಲಿ 1 ಲಕ್ಷದ 17 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಪತ್ತೆ

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,17,100 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,71,363 ಕ್ಕೆ ಏರಿಕೆಯಾಗಿದೆ. ಹಾಗೆಯೇ 302 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,83,178ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3,71,363ಕ್ಕೆ ಏರಿಕೆಯಾಗಿದೆ. 30,836 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖರಾದವರ ಸಂಖ್ಯೆ 3,43,71,845ಕ್ಕೆ ಏರಿದೆ.
ಇನ್ನು ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3,007ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,199ಮಂದಿ ಗುಣಮುಖರಾಗಿದ್ದಾರೆ.
ನಿನ್ನೆ ದೇಶದಲ್ಲಿ 15,13,377 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 94,47,056 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,49,66,81,156 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
