
ನವದೆಹಲಿ: ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್ ಪಿಜಿ 2021 ರ ಕೌನ್ಸಿಲಿಂಗ್ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದಾರೆ.ಸುಪ್ರೀಂಕೋರ್ಟ್ ಸ್ಪಷ್ಟ ಭರವಸೆಯ ಮೇರೆಗೆ ವೈದ್ಯಕೀಯ ಕೌನ್ಸಿಲಿಂಗ್ ಸಮಿತಿ ಇದೇ 12 ರಿಂದ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭಿಸಲಿದೆ. ಕೋವಿಡ್ ಸೋಂಕು ನಿಯಂತ್ರಿಸಲು ಇದು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.



