ಮೇಕೆದಾಟು ಪಾದಯಾತ್ರೆ: 30 ಮಂದಿ ವಿರುದ್ಧ ಎಫ್ ಐ ಆರ್ ದಾಖಲು

ರಾಮನಗರ: ಸರ್ಕಾರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ. ಸಾತನೂರು ಪೊಲೀಸ್ ಠಾಣೆಯಲ್ಲಿ 30 ಜನ್ರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೋವಿಡ್ ನಿಯಮಾವಳಿ ಹಾಗೂ ಕರ್ಪ್ಯು ಉಲ್ಲಂಘನೆ ಹಿನ್ನಲೆಯಲ್ಲಿ ಕೇಸ್. ಈ ಬಗ್ಗೆ ರಾಮನಗರ ಜಿಲ್ಲಾ ಎಸ್.ಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.
ಈ ನಡುವೆ ಪಾದಯಾತ್ರೆಯಿಂದ ಕೋವಿಡ್ ಪ್ರಕರಣಗಳು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯಧಿಕಾರಿಗಳು ಆತಂಕ ವ್ಯಕ್ತಪಡಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿದಿದೆ.ಪಾದಯಾತ್ರೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಯರು ಭಾಗಿಯಾಗಿರುವು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಭಾನುವಾರದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ. ಸರ್ಕಾರ ಕ್ರಮ ಕೈಗೊಂಡರೂ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಅವರು ಸವಾಲು ಹಾಕಿದ್ದಾರೆ.
