
ಬೆಂಗಳೂರು: ಸರ್ಕಾರಕ್ಕೆ ಸೆಡ್ಡು ಹೊಡೆದು ಮೇಕೆದಾಟು ಪಾದಯಾತ್ರೆ ನಡೆಸಿರುವ ಪ್ರದೇಶ ಕಾಂಗ್ರೆಸ್ ಕ್ರಮದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಶ್ರೀಧರ್ ಪ್ರಭು ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಬುಧವಾರ ನಡೆಯುವ ನಿರೀಕ್ಷೆ ಇದೆ.
ಕಾಂಗ್ರೆಸ್ ಪಾದಯಾತ್ರೆಯಿಂದ ಗಂಡಾಂತರಕಾರಿ ಕೊರೋನಾ ಸೋಂಕು ಹಬ್ಬುತ್ತಿದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸದೇ ಪಾದಯಾತ್ರೆ ನಡೆಸಲಾಗುತ್ತಿದೆ. ಮಕ್ಕಳನ್ನು ಭೇಟಿ ಮಾಡುತ್ತಿದ್ದಾರೆ ಎಂದು ಶ್ರೀಧರ್ ಅರ್ಜಿಯಲ್ಲಿ ದೂರಿದ್ದಾರೆ.
