Breaking NewsLatestರಾಜ್ಯಸುದ್ದಿ

Karnataka Covid Update: ರಾಜ್ಯದಲ್ಲಿ ಇಂದು 25 ಸಾವಿರ ಕೊರೊನಾ ಕೇಸ್​ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 25,005 ಕೊರೊನಾ ಕೇಸ್​​ಗಳು ಹಾಗೂ ಬೆಂಗಳೂರಿನಲ್ಲಿ 18,374 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 2,01,704 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಇವರಲ್ಲಿ ಬೆಂಗಳೂರಿನಲ್ಲಿ 18,374 ಕೊರೊನಾ ಪ್ರಕರಣಗಳು ಹಾಗೂ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯಾಧ್ಯಂತ 2,363 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 91 ಸಾವಿರ ಸಕ್ರಿಯ ಪ್ರಕರಣಗಳಿವೆ.

Spread the love

Related Articles

Leave a Reply

Your email address will not be published. Required fields are marked *

Back to top button