ಗೋವಾ ವಿಧಾನಸಭಾ ಚುನಾವಣೆ : 38 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

ಪಣಜಿ : ಗೋವಾ ವಿಧಾನಸಭೆಯ 40 ಕ್ಷೇತ್ರಗಳ ಪೈಕಿ 38 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷ ತೀರ್ಮಾನಿಸಿದೆ. ಈಗಾಗಲೇ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು ಇದೇ 16ರಂದು ಸಂಸದೀಯ ಮಂಡಳಿ ಸಭೆ ಅನುಮತಿ ಪಡೆದು ಅಧಿಕೃತವಾಗಿ ಪಟ್ಟಿ ಪ್ರಕಟಿಸುವುದಾಗಿ ಬಿಜೆಪಿ ಮೂಲಗಳು ಹೇಳಿವೆ.
ಮುಂದಿನ ತಿಂಗಳು ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು 40 ಕ್ಷೇತ್ರಗಳ ಪೈಕಿ 38 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ದೇ ಮಾಡಲಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಕಾರಣ ಅಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿಲ್ಲ ಎಂದು ಪಕ್ಷ ಹೇಳಿಕೊಂಡಿದೆ.
ಬಿಜೆಪಿ ಉಸ್ತುವಾರಿ ಹೊಣೆಹೊತ್ತಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಮುಖ ಬಿಜೆಪಿ ನಾಯಕರ ಜೊತೆ ಸಮಾಲೋಚನೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದು ಸಂಸದೀಯ ಮಂಡಳಿ ಸಭೆಯ ಅನುಮತಿ ನಂತರ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.
