Latestಉತ್ತರ ಕನ್ನಡಜಿಲ್ಲಾ ಸುದ್ದಿ
ಶಿರಸಿಯಲ್ಲಿ ಚಾಕು ಇರಿದು ಕೊಲೆಗೆ ಯತ್ನ : ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಝೂ ಸರ್ಕಲ್ ಬಳಿಯ ಆಲೇಸರ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ತರಕೇಶ್ವರ ಹನುಮಂತ ತಿಳವಳ್ಳಿ, ಹಾನಗಲ್ ಎಂಬಾತನೇ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣದಲ್ಲಿ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ.ಬದರಿನಾಥ, ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಭೇಟಿ ನೀಡಿದ್ದು, ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ನಾಪತ್ತೆಯಾಗಿದ್ದು, ಆರೋಪಿಯನ್ನು ಹಿಡಿಯಲು ನಾಲ್ವರು ಪಿಎಸೈ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.



