Breaking NewsLatestರಾಜಕೀಯರಾಷ್ಟ್ರೀಯಸುದ್ದಿ
ವಿಧಾನಸಭಾ ಚುನಾವಣೆ ಮುಂದೂಡಲು ಪಂಜಾಬ್ ಸಿಎಂ ಆಗ್ರಹ

Panjab Election ಅಮೃತಸರ: ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಒಂದು ವಾರದ ಮಟ್ಟಿಗೆ ಮುಂದೂಡಬೇಕೆಂದು ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ ಅವರಿಗೆ ಪತ್ರ ಬರೆದು ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಒಂದು ವಾರದ ಮಟ್ಟಿಗೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.
ಕಾರಣ ಇಷ್ಟೇ ಫೆಬ್ರವರಿ 10 ರಿಂದ 16 ರವೆಗೆ ರಾಜ್ಯದಿಂದ 20 ಲಕ್ಷಕ್ಕೂ ಹೆಚ್ಚು ಜನ ಉತ್ತರಪ್ರದೇಶದ ಕಾಶಿಗೆ ಹೋಗಲಿದ್ದಾರೆ ಹೀಗಾಗಿ ಅವರು ಮತದಾನದಿಂದ ವಂಚಿತರಾಗಲಿದ್ದಾರೆ ಎಂದು ಮನವಿ ಮಾಡಿದ್ದಾರೆ. ಫೆಬ್ರವರಿ 14 ರಂದು ರಾಜ್ಯದ 117 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ.
