Latestಜಿಲ್ಲಾ ಸುದ್ದಿರಾಮನಗರಸುದ್ದಿ

ರೈತನ ಮೇಲೆ ರೀಲರ್ ದುಂಡಾವರ್ತನೆ: ಹೆಚ್‍ಡಿಕೆ ಖಂಡನೆ

ರಾಮನಗರ: ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್‌ ಒಬ್ಬ ದುಂಡಾವರ್ತನೆ ನಡೆಸಿದ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಖಂಡಿಸಿದ್ದಾರೆ. ರೇಷ್ಮೆ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಯೊಟ್ಟಿಗೆ ದೂರವಾಣಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ತಪ್ಪಿತಸ್ಥ ರೀಲರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯವಾಗಿದೆ ಎಂದರು.

ದೌರ್ಜನ್ಯ ಎಸಗಿದ ರೀಲರುಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ಅವರಿಗೆ ತಿಳಿಸಿದ್ದೇನೆ. ರೇಷ್ಮೆಗೂಡು ಹರಾಜು ನಡೆಯುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವಂತೆಯೂ ಸೂಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಬಿಗಿಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ ಎಂದು‌ ಹೆಚ್ಡಿಕೆ ಟ್ವಿಟ್ ಮಾಡಿದ್ದಾರೆ.

ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲವೆಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button