Breaking NewsLatestರಾಷ್ಟ್ರೀಯಸುದ್ದಿ
India covid Update: ದೇಶದಲ್ಲಿ ಒಂದೇ ದಿನ 2.38 ಲಕ್ಷ ಕೊರೊನಾ ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ನಿನ್ನೆಗಿಂತ ಇಂದು 20 ಸಾವಿರ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 2,38,018 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. 310 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,86,761ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,36,628ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,57,421 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,53,94,882ಕ್ಕೆ ತಲುಪಿದೆ.
ಒಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 8,891 ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಒಮಿಕ್ರಾನ್ ಸೋಂಕಿತರ ಸಂಖ್ಯೆ 8,891ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
