Breaking NewsLatestರಾಷ್ಟ್ರೀಯಸುದ್ದಿ
ಅಜಂಗಢ ದಿಂದ ಅಖಿಲೇಶ್ ಯಾದವ್ ಸ್ಪರ್ಧೆ

ಲಖ್ನೋ: ಆಡಳಿತಾರೂಢ ಬಿಜೆಪಿಗೆ ಸೆಡ್ಡು ಹೊಡೆಯಲು ಎಲ್ಲಾ ತಯಾರಿ ಮಾಡಿಕೊಳ್ಳುತ್ತಿರುವ ಸಮಾಜವಾದಿ ಪಕ್ಷದ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಅಜಂಗಢ ವಿಧಾನಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಪಕ್ಷದ ಉನ್ನತ ಮೂಲಗಳ ಪ್ರಕಾರ ಅಜಂಗಢ ಕ್ಷೇತ್ರದಿಂದಲೇ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಚುನಾವಣಾ ಆಯೋಗ ಪಂಚ ರಾಜ್ಯಗಳಲ್ಲಿ ಬಹಿರಂಗ ಚುನಾವಣಾ ಸಭೆ, ಸಮಾವೇಶ ರೋಡ್ ಶೋ, ಬೈಕ್ ಶೋ, ಕಾರ್ ಶೋ ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
