Breaking NewsLatestರಾಷ್ಟ್ರೀಯಸುದ್ದಿ
INS Ranvir: ಐಎನ್ಎಸ್ ರಣವೀರ್ ಹಡಗಿನಲ್ಲಿ ಸ್ಫೋಟ : ಮೂವರು ನೌಕಾಪಡೆಯ ಯೋಧರ ಸಾವು

ನವದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್ಎಸ್ ರಣವೀರ್ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಮೃತಪಟ್ಟಿದ್ದಾರೆ, ಹಲವರಿಗೆ ಗಾಯವಾಗಿದೆ.
ಮುಂಬೈನ ನೌಕಾನೆಲೆಯಲ್ಲಿ ನಡೆದ ದುರದೃಷ್ಟಕರ ಘಟನೆ ನಡೆದಿದ್ದು, ಐಎನ್ಎಸ್ ರಣವೀರ್ ಹಡಗಿನ ಆಂತರಿಕ ವಿಭಾಗದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದಾರೆ. ಕೃಷ್ಣಕುಮಾರ್, ಸುರೇಂದ್ರ ಕುಮಾರ್ ಹಾಗೂ ಎಕೆ ಸಿಂಗ್ ಮೃತ ಯೋಧರು ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ನೌಕೆಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ ಎಂದು ತಿಳಿಸಲಾಗಿದ್ದು, ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಸಲು ನೌಕಾಪಡೆಯು ವಿಚಾರಣಾ ಆಯೋಗವನ್ನು ರಚಿಸಿದೆ.
