Breaking NewsLatestರಾಜ್ಯ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಬಹುತೇಕ ನಿಶ್ಚಿತ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದನ್ನು ನಿಯಂತ್ರಿಸುವಾಗಿ ಈಗಾಗಲೇ ನೈಟ್ ಕರ್ಫ್ಯೂ ಜತೆಗೆ ವೀಕೆಂಡ್ ಕರ್ಫ್ಯೂ ವಿಧಿಸಿತ್ತು. ಇದೀಗ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದೆ.

ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯುವ ಸಾಧ್ಯತೆ ನಿಚ್ಛಳವಾಗಿದೆ ಎಂದು ಮೂಲಗಳು ತಿಳಿಸಿವೆ.. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ. ಇನ್ನು ನೈಟ್ ಕರ್ಫ್ಯೂ 10 ಗಂಟೆಗೆ ಬದಲು 11 ಗಂಟೆಗೆ ವಿಧಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್, ಆರಗ ಜ್ಞಾನೇಂದ್ರ, ಆರ್. ಅಶೋಕ್, ಗೋವಿಂದ್ ಕಾರಜೋಳ, ಬಿಸಿ ನಾಗೇಶ್, ವಿಶ್ವ ಆರೋಗ್ಯ ಸಂಸ್ಥೆಯ ಓರ್ವ ಪ್ರತಿನಿಧಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ಸಭೆ ಮುಂದುವರಿದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button