Breaking NewsLatestಮೆಟ್ರೋರಾಜ್ಯಸುದ್ದಿ
K L Manjunath: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ. ಎಲ್ ಮಂಜುನಾಥ್ ನಿಧನ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕೆ. ಎಲ್ ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಮಂಜುನಾಥ್ ಅವರು ಹಾಲಿ ಹಾಲಿ ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿದ್ದರು.
ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎನ್ನಲಾಗಿದೆ.
ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ, ಕೆಪಿಸಿಸಿ ಆದ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
