ಮನರಂಜನೆಸಿನಿಮಾಸೆಲೆಬ್ರಿಟಿ

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕನ ಹತ್ಯೆಗೆ ಸಂಚು: ಆರೋಪಿಗಳ ಬಂಧನ

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರ ಹತ್ಯೆಗೆ ಸಂಚು ರೂಪಿಸಿದ್ದ ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ, ಈ ಹಿಂದೆ 16 ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು ಇದೀಗ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸಾಕಷ್ಟು ಹಿಟ್ ಸಿನಿಮಾಗಳನ್ನ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆಗಿದ್ದ ಮದಗಜ ಸಿನಿಮಾ ಹಿಟ್ ಆಗಿದ್ದು ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿರುವ ಉಮಾಪತಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಪ್ರಕರಣದಲ್ಲಿ ಈ ಹಿಂದೆ 15 ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು ಇದೀಗ ಉಳಿದ ಇಬ್ಬರನ್ನು ಬಂಧಿಸಿದ್ದಾರೆ,

2020ರಲ್ಲಿ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದು ಜಯನಗರ ಪೊಲೀಸರು ಬಂಧಿಸಿದ್ದರು, ಪ್ರಕರಣದ ಇಬ್ಬರು ಆರೋಪಿಗಳಾದ ದರ್ಶನ್ ಹಾಗೂ ಸಂಜು ಎಂಬುವವರು ತಲೆಮರೆಸಿಕೊಂಡಿದ್ದರು. ಸಾಕಷ್ಟು ಸಮಯದಿಂದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದರು ಎಲ್ಲೂ ಸಿಕ್ಕಿರಲಿಲ್ಲ. ಇದೀಗ ತಲೆ ಮರೆಸಿಕೊಂಡಿದ್ದು ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ದರ್ಶನ್ ಹಾಗೂ ಸಂಜು ಪ್ರಕರಣದ 16 ಹಾಗೂ 17ನೇ ಆರೋಪಿಗಳಾಗಿದ್ದಾರೆ, ಇವರಿಬ್ಬರು ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದರು. ಆರೋಪಿಗಳು ಬೆಂಗಳೂರಿನ ಸುಂಕದಕಟ್ಟೆಯ ಚೈತ್ರಾ ಬಾರ್ ಬಳಿ ಇದ್ದರು, ಈ ಬಗ್ಗೆ ಖಷಿತ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button