Breaking NewsLatestಮೆಟ್ರೋರಾಜ್ಯರಾಷ್ಟ್ರೀಯಸುದ್ದಿ

2047ಕ್ಕೂ ಮೊದಲು ನವ ಭಾರತ ನಿರ್ಮಿಸುವ ಗುರಿ ಹೊಂದಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಇಂಡಿಯಾ ಗೇಟ್‌ನಲ್ಲಿ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು ಇದೇ ವೇಳೆ, ಪ್ರಧಾನಿ ಅವರು 2019, 2020, 2021 ಮತ್ತು 2022 ರ ಸುಭಾಸ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರಗಳನ್ನು ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು, ಶೀಘ್ರವೇ ಹೊಲೊಗ್ರಾಮ್ ಪ್ರತಿಮೆಯನ್ನು ಭವ್ಯವಾದ ಗ್ರಾನೈಟ್ ಪ್ರತಿಮೆಯಾಗಿ ಬದಲಾಯಿಸಲಾಗುವುದು. ನೇತಾಜಿ ಅವರ ಪ್ರತಿಮೆಯು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದರು.

ಈ ಹಿಂದೆ ವಿಪತ್ತು ನಿರ್ವಹಣೆಯನ್ನು ಕೃಷಿ ಇಲಾಖೆ ನಿರ್ವಹಿಸುತ್ತಿತ್ತು. ನಮ್ಮ ಸರ್ಕಾರ ಎನ್ ಡಿಆರ್ ಎಫ್ ಅನ್ನು ಬಲಪಡಿಸಿದೆ. ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿನ ನಮ್ಮ ಉಪಕ್ರಮಗಳನ್ನು ಅಂತಾರಾಷ್ಟ್ರೀಯ ಏಜೆನ್ಸಿಗಳು ಶ್ಲಾಘಿಸಿವೆ ಎಂದರು.

ನಾವು ಸುಧಾರಣೆಗೆ ಒತ್ತು ನೀಡುವುದರ ಜೊತೆಗೆ ಪರಿಹಾರ, ರಕ್ಷಣೆ ಮತ್ತು ಪುನರ್ವಸತಿಗೆ ಒತ್ತು ನೀಡಿದ್ದೇವೆ. ಎನ್ ಡಿ ಆರ್ ಎಫ್ ನ್ನು ಆಧುನೀಕರಿಸಿದ್ದೇವೆ. ಅದನ್ನು ದೇಶಾದ್ಯಂತ ವಿಸ್ತರಿಸಿದ್ದೇವೆ. ಯೋಜನೆ ಮತ್ತು ನಿರ್ವಹಣೆಗಾಗಿ ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಇತರ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದೂ ಪ್ರಧಾನಿ ತಿಳಿಸಿದರು.

“ಸ್ವತಂತ್ರ ಭಾರತದ ಕನಸಿನಲ್ಲಿ ಎಂದಿಗೂ ನಂಬಿಕೆ ಕಳೆದುಕೊಳ್ಳಬೇಡಿ, ಭಾರತವನ್ನು ಅಲುಗಾಡಿಸುವ ಶಕ್ತಿ ಜಗತ್ತಿನಲ್ಲಿ ಇಲ್ಲ” ಎಂದು ನೇತಾಜಿ ಹೇಳುತ್ತಿದ್ದರು. ಇಂದು ನಾವು ಸ್ವತಂತ್ರ ಭಾರತದ ಕನಸುಗಳನ್ನು ನನಸಾಗಿಸುವ ಗುರಿ ಹೊಂದಿದ್ದೇವೆ. ಸ್ವಾತಂತ್ರ್ಯದ ನೂರನೇ ವರ್ಷ, 2047ಕ್ಕೂ ಮೊದಲು ನವ ಭಾರತ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ ಪ್ರಧಾನಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ನಮ್ಮ ಸರ್ಕಾರಕ್ಕೆ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button