ಮನರಂಜನೆಸಿನಿಮಾ

ಸಿನಿಪ್ರಿಯರಿಗೆ ಗುಡ್ ನ್ಯೂಸ್ : ಸದ್ಯದಲ್ಲೆ ಶೇ.100 ಭರ್ತಿಗೆ ಅನುಮತಿ

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗಿದೆ. ಇದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಕೆಲ ನಿರ್ಬಂಧ ಹೇರಿತ್ತು. ನೈಟ್ ಕರ್ಫ್ಯೂ ಜತೆ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ವಿಧಿಸಿತ್ತು.

ಇದ್ದರಿಂದಾಗಿ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಯಾಕಂದರೆ ಕೊರೊನಾ ಹೆಚ್ಚಳದಿಂದ ಚಿತ್ರಮಂದಿರಕ್ಕೆ ಸೀಮಿತ ಆಸಗಳ ಭರ್ತಿಗೆ ಸರ್ಕಾರ ಅವಕಾಶ ನೀಡಿತ್ತು. ವೀಕೆಂಡ್ ಕರ್ಫ್ಯೂ ವಿಧಿಸಿದ್ದರಿಂದ ಚಿತ್ರಮಂದಿರಗಳು ಬಂದ್ ಆಗಿತ್ತು.

ಹೀಗಾಗಿ ಚಿತ್ರಮಂದಿರಕ್ಕೆ ಪೆಟ್ಟು ಬಿದ್ದಿತ್ತು. ಇದೀಗ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ತೆಗೆದುಕೊಂಡಿದ್ದಾರೆ. ಇದ್ದರಿಂದ ಕನ್ನಡ ಚಿತ್ರರಂಗದಲ್ಲಿ ಮತ್ತೆ ಸಿನಿಮಾ ಬಿಡುಗಡೆಯ ಖುಷಿಯಲ್ಲಿದ್ದಾರೆ.

ಸದ್ಯಕ್ಕೆ ಶೇ. 50ರಷ್ಟು ಸೀಟು ಭರ್ತಿಗೆ ಅವಕಾಶ ಕೊಟ್ಟಿದ್ದು, ಸದ್ಯದಲ್ಲೇ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button