Breaking NewsLatestಜಿಲ್ಲಾ ಸುದ್ದಿರಾಜಕೀಯಶಿವಮೊಗ್ಗ

ಮಂತ್ರಿ ಸ್ಥಾನಕ್ಕಿಂತ ಪಕ್ಷದ ಜವಾಬ್ದಾರಿ ನನಗೆ ಇಷ್ಟ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಚುನಾವಣೆಯ ಹಿತದೃಷ್ಟಿಯಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಅಗತ್ಯವಿದೆ. ಹಾಗಾಗಿ ನನಗೆ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗು ಅಂದಾಗ ಆಗಿದ್ದೇನೆ. ಈಗಲೂ ಹೈಕಮಾಂಡ್ ಏನು ಹೇಳುತ್ತೆ ಅದನ್ನು ಮಾಡಲು ಸಿದ್ಧ. ಪಕ್ಷ ಸಂಘಟನೆ ಜವಾಬ್ದಾರಿ ಕೊಟ್ಟರೂ ಸ್ವೀಕರಿಸಲು ರೆಡಿಯಿದ್ದೇನೆ. ಮಂತ್ರಿ ಸ್ಥಾನಕ್ಕಿಂತಲೂ ಪಕ್ಷ ಸಂಘಟನೆ ಜವಾಬ್ದಾರಿ ನಿಭಾಯಿಸಲು ನನಗೆ ಇಷ್ಟ. ಕೇಂದ್ರ ಹಾಗೂ ರಾಜ್ಯ ನಾಯಕರ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದರು.

ಸಂಪುಟ ವಿಸ್ತರಣೆ ಆಗಬೇಕಾಗಿರುವುದು ಸ್ವಾಭಾವಿಕ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಹಾಗಾಗಿ ಸಂಪುಟ ವಿಸ್ತರಣೆ ಅಗತ್ಯವಿದೆ. ಸಚಿವ ಸ್ಥಾನ ಯಾರಿಗೆ ನೀಡಿದ್ರೆ ಉತ್ತಮ ಎಂಬುದನ್ನು ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button